2 Chronicles 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
Kannada BSI Bible 2016
ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.
Kannada Bible (KNCL) BSI 2016
ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.