2 Chronicles 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟ್ ಮತ್ತು ಕ್ಯೂ ದೇಶಗಳಿಂದ ಸೊಲೊಮೋನನು ಕುದುರೆಗಳನ್ನು ತನ್ನ ವ್ಯಾಪಾರಸ್ಥರ ಮೂಲಕ ಖರೀದಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
Kannada BSI Bible 2016
ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
Kannada Bible (KNCL) BSI 2016
ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು