2 Chronicles 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
Kannada BSI Bible 2016
ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಥಕ್ಕೆ ಆರುನೂರು ರೂಪಾಯಿಗಳಂತೆಯೂ ಕುದುರೆಗೆ ನೂರೈವತ್ತು ರೂಪಾಯಿಗಳಂತೆಯೂ ಕೊಟ್ಟು ರಥಗಳನ್ನೂ ಕುದುರೆಗಳನ್ನೂ ಐಗುಪ್ತದೇಶದಿಂದ ತರಿಸುತ್ತಿದ್ದರು. ಹೀಗೆಯೇ ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.
Kannada Bible (KNCL) BSI 2016
ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ ಕುದುರೆಗಳನ್ನೂ ಈಜಿಪ್ಟ್ ದೇಶದಿಂದ ತರಿಸುತ್ತಿದ್ದರು; ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರು ಇವರ ಮುಖಾಂತರವೇ ತರಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.