2 Chronicles 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
Kannada BSI Bible 2016
ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
Kannada Bible (KNCL) BSI 2016
ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.