2 Chronicles 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
Kannada BSI Bible 2016
ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
Kannada Bible (KNCL) BSI 2016
ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.