2 Chronicles 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನ ಮೇಲೆ ಮಹಾಕೃಪೆಯನ್ನು ತೋರಿ ಅವನ ಸ್ಥಾನದಲ್ಲಿ ಅರಸನಾಗುವದಕ್ಕೆ ನನ್ನನ್ನು ಆರಿಸಿಕೊಂಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
Kannada BSI Bible 2016
ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ತಂದೆಯಾದ ದಾವೀದನಿಗೆ ಮಹಾಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.
Kannada Bible (KNCL) BSI 2016
ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.