2 Chronicles 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
Kannada BSI Bible 2016
ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು\, ಎಂದು ಉತ್ತರ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.