2 Chronicles 10:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
Kannada BSI Bible 2016
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರು ಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.
Kannada Bible (KNCL) BSI 2016
ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.