2 Chronicles 10:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
Kannada BSI Bible 2016
ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
Kannada Bible (KNCL) BSI 2016
ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.