2 Chronicles 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ರೆಹಬ್ಬಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದ್ದರಿಂದ ಇಸ್ರೇಲರೇ, ನಾವು ನಮ್ಮನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದವರನ್ನೇ ಆಳಲಿ” ಎಂದು ಹೇಳಿ ಸೇರಿಬಂದವರನ್ನೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
Kannada BSI Bible 2016
ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ತಿಳಿದು ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
Kannada Bible (KNCL) BSI 2016
ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.