2 Chronicles 10:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದೋರಾಮನು ಬಿಟ್ಟೀಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಬಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಬಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
Kannada BSI Bible 2016
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲ್ಯರ ಬಳಿಗೆ ಕಳುಹಿಸಲು ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇವಿುಗೆ ಓಡಿ ಹೋದನು.
Kannada Bible (KNCL) BSI 2016
ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.