2 Chronicles 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಬಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
Kannada BSI Bible 2016
ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿದೊಡನೆ ಐಗುಪ್ತದಿಂದ ಹಿಂದಿರುಗಿ ಬಂದಿದ್ದನು.
Kannada Bible (KNCL) BSI 2016
ಇತ್ತ ಅರಸ ಸೊಲೊಮೋನನಿಗೆ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಈಜಿಪ್ಟಿನಿಂದ ಹಿಂದಿರುಗಿ ಬಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.