2 Chronicles 10:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.
Kannada BSI Bible 2016
ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀ ಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -
Kannada Bible (KNCL) BSI 2016
“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಈ ಭಾರವಾದ ನೊಗವನ್ನು ಹಗುರಮಾಡುವುದಾದರೆ ನಾವು ನಿಮಗೆ ಸೇವೆಮಾಡುತ್ತೇವೆ,” ಎಂದನು. ಅವನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.