2 Chronicles 10:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.
Kannada BSI Bible 2016
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
Kannada Bible (KNCL) BSI 2016
ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.