2 Chronicles 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
Kannada BSI Bible 2016
ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ನೀನು ಈ ಜನರಿಗೆ ದಯತೋರಿಸಿ ಅವರನ್ನು ಮೆಚ್ಚಿಸುವ ಒಳ್ಳೇ ಉತ್ತರ ಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.
Kannada Bible (KNCL) BSI 2016
ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.