2 Chronicles 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
Kannada BSI Bible 2016
ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಯೆಹೋವನಿಗೆ ಯಾಜಕಸೇವೆಮಾಡದಂತೆ ಯಾರೊಬ್ಬಾಮನೂ ಅವನ ಮಕ್ಕಳೂ ಅವರನ್ನು ತಳ್ಳಿಬಿಟ್ಟು
Kannada Bible (KNCL) BSI 2016
ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.