2 Chronicles 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
Kannada BSI Bible 2016
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.
Kannada Bible (KNCL) BSI 2016
ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,