2 Chronicles 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
Kannada BSI Bible 2016
ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.
Kannada Bible (KNCL) BSI 2016
ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.