2 Chronicles 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.
Kannada BSI Bible 2016
ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರೂ ಮೊದಲನೆಯ ಮೂರು ವರುಷಗಳಲ್ಲಿ ದಾವೀದಸೊಲೊಮೋನರ ಮಾರ್ಗದಲ್ಲಿ ನಡೆಯುತ್ತಿದ್ದದರಿಂದ ಯೆಹೂದರಾಜ್ಯವು ಆ ವರುಷಗಳಲ್ಲಿ ವೃದ್ಧಿಯಾಗಿ ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.
Kannada Bible (KNCL) BSI 2016
ಇವರೆಲ್ಲರು ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗೂ ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಎಂದೇ ಜುದೇಯರಾಜ್ಯವು ಆ ವರ್ಷಗಳಲ್ಲಿ ವೃದ್ಧಿಯಾಗಿ, ಸೊಲೊಮೋನನ ಮಗ ರೆಹಬ್ಬಾಮನು ಬಲಿಷ್ಠನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು.