2 Chronicles 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.
Kannada BSI Bible 2016
ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
Kannada Bible (KNCL) BSI 2016
ರೆಹಬ್ಬಾಮನು, ದಾವೀದನ ಮಗ ಯೆರೀಮೋತನಿಗೆ ಜೆಸ್ಸೆಯ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.