2 Chronicles 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮೊಮ್ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
Kannada BSI Bible 2016
ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
Kannada Bible (KNCL) BSI 2016
ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.