2 Chronicles 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
Kannada BSI Bible 2016
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;
Kannada Bible (KNCL) BSI 2016
ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.