2 Chronicles 12:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
Kannada BSI Bible 2016
ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
Kannada Bible (KNCL) BSI 2016
ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.