2 Chronicles 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
Kannada BSI Bible 2016
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ರೆಹಬ್ಬಾಮನು ಯೆರೂಸಲೇವಿುನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಾಲ್ವತ್ತೊಂದನೆಯ ವರುಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇವಿುನಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.