2 Chronicles 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
Kannada BSI Bible 2016
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.