2 Chronicles 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
Kannada BSI Bible 2016
ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯೆರೂಸಲೇವಿುಗೆ ವಿರೋಧವಾಗಿ ಬಂದ ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
Kannada Bible (KNCL) BSI 2016
ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.