2 Chronicles 13:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
Kannada BSI Bible 2016
ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
Kannada Bible (KNCL) BSI 2016
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.