2 Chronicles 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
Kannada BSI Bible 2016
ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾಗಿರುವದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತೂರಿಗಳನ್ನು ಊದಿದರು.
Kannada Bible (KNCL) BSI 2016
ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.