2 Chronicles 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
Kannada BSI Bible 2016
ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.
Kannada Bible (KNCL) BSI 2016
ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.