2 Chronicles 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
Kannada BSI Bible 2016
ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.
Kannada Bible (KNCL) BSI 2016
ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.