2 Chronicles 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
Kannada BSI Bible 2016
ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.
Kannada Bible (KNCL) BSI 2016
ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.