2 Chronicles 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
Kannada Bible (KNCL) BSI 2016
ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.