2 Chronicles 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
Kannada BSI Bible 2016
ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.
Kannada Bible (KNCL) BSI 2016
ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.