2 Chronicles 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ನಿಮ್ಮಲ್ಲಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
Kannada BSI Bible 2016
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನೀವು ದೊಡ್ಡ ಗುಂಪಾಗಿರುವದರಿಂದಲೂ ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿರುವದರಿಂದಲೂ ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರೋಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
Kannada Bible (KNCL) BSI 2016
ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.