2 Chronicles 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.
Kannada BSI Bible 2016
ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು.
Kannada Bible (KNCL) BSI 2016
ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.