2 Chronicles 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.
Kannada BSI Bible 2016
ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು.
Kannada Bible (KNCL) BSI 2016
ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.