2 Chronicles 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
Kannada BSI Bible 2016
ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.
Kannada Bible (KNCL) BSI 2016
ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.