2 Chronicles 14:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
Kannada BSI Bible 2016
ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.
Kannada Bible (KNCL) BSI 2016
ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.