2 Chronicles 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.
Kannada BSI Bible 2016
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.
Kannada Bible (KNCL) BSI 2016
ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.