2 Chronicles 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳುಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
Kannada BSI Bible 2016
ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು.
Kannada Bible (KNCL) BSI 2016
ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.