2 Chronicles 15:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
Kannada BSI Bible 2016
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.
Kannada Bible (KNCL) BSI 2016
ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.

Recommended Reading