2 Chronicles 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
Kannada BSI Bible 2016
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ.
Kannada Bible (KNCL) BSI 2016
ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.