2 Chronicles 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
Kannada BSI Bible 2016
ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
Kannada Bible (KNCL) BSI 2016
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.