2 Chronicles 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
Kannada BSI Bible 2016
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.
Kannada Bible (KNCL) BSI 2016
ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.