2 Chronicles 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲಿ ಬರುವುದಕ್ಕಾಗಲಿ ಯಾರಿಗೂ ಆಗದಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
Kannada BSI Bible 2016
ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.
Kannada Bible (KNCL) BSI 2016
ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.