2 Chronicles 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
Kannada BSI Bible 2016
ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಬುಕ್ಕಿಟ್ಟುಗಾರರ ಕಸಬಿನ ಮೇರೆಗೆ ವಿುಶ್ರಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು ಅವನು ತನಗೋಸ್ಕರ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಅವನಿಗೋಸ್ಕರ ಬಹುಧೂಪವನ್ನು ಸುಟ್ಟರು.
Kannada Bible (KNCL) BSI 2016
ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.