2 Chronicles 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
Kannada BSI Bible 2016
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಷ್ಯಲೂಬ್ಯರ ಸೈನ್ಯವು ಅಪರಿವಿುತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೋ! ನೀನು ಯೆಹೋವನ ಮೇಲೆ ಆತುಕೊಂಡದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
Kannada Bible (KNCL) BSI 2016
ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.