2 Chronicles 17:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.
Kannada BSI Bible 2016
ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆಹೂದದ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲಿಯೂ ಸೈನ್ಯವನ್ನಿರಿಸಿ ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ಕಿತ್ತುಕೊಂಡಿದ್ದ ಎಫ್ರಾಯೀಮ್ಯರ ಪಟ್ಟಣದಲ್ಲಿಯೂ ಅಧಿಕಾರಿಗಳನ್ನು ನೇವಿುಸಿದನು.
Kannada Bible (KNCL) BSI 2016
ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.