2 Chronicles 17:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
Kannada BSI Bible 2016
ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು.
Kannada Bible (KNCL) BSI 2016
ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.