2 Chronicles 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
Kannada BSI Bible 2016
ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದದೇಶದಲ್ಲಿದ್ದ ಪೂಜಾಸ್ಥಳಗಳನ್ನೂ ಅಶೇರವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.
Kannada Bible (KNCL) BSI 2016
ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.